ಮನೆ ರಾಜ್ಯ ತಜ್ಞ ವೈದ್ಯರ ನಿವೃತ್ತಿ ವಯಸ್ಸು ಏರಿಕೆಗೆ ಸರ್ಕಾರ ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ತಜ್ಞ ವೈದ್ಯರ ನಿವೃತ್ತಿ ವಯಸ್ಸು ಏರಿಕೆಗೆ ಸರ್ಕಾರ ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

0

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯದಲ್ಲಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು ೬೦ ವರ್ಷದಿಂದ ೬೫ ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಅವರು ಹೇಳಿದ್ದಾರೆ.

ಕಲಬುರ್ಗಿಯ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಗರದಲ್ಲಿ ನಡೆದ ಸಂವಾದದಲ್ಲಿ ಸಚಿವರು ಈ ಮಾತು ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ತಜ್ಞರಾಗಿ ಕರ್ತವ್ಯ ನಿರ್ವಹಿಸಲು ಅತ್ಯಂತ ಕಡಿಮೆ ಸೇವಾವಧಿ ಸಿಗುತ್ತದೆ. ಇದನ್ನು ವಿಸ್ತರಿಸಿದರೆ ಅನುಕೂಲವಾಗುತ್ತದೆ’ ಎಂದು ವೈದ್ಯರು ಸಂವಾದದ ವೇಳೆ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು,ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ವಿಷಯವನ್ನು ಮುಖ್ಯಮಂತ್ರಿ ಬಳಿ ಪ್ರಸ್ತಾಪಿಸುತ್ತೇನೆ’ ಎಂದಿದ್ದಾರೆ.

ಜತೆಗೆ, `ಕಲಬುರ್ಗಿ ಜಯದೇವ ಆಸ್ಪತ್ರೆಗೆ ರೊಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಹೆಚ್ಚುವರಿ ಹಣ ಮಂಜೂರು ಮಾಡಲಾಗುತ್ತದೆ. ಮಕ್ಕಳ ವಿಭಾಗಕ್ಕೆ ಐದು ಹೆಚ್ಚುವರಿ ಶಸ್ತ್ರಚಿಕಿತ್ಸಾ ಘಟಕ, ಪ್ರತ್ಯೇಕ ಸಂಶೋಧನಾ ವಿಭಾಗ, ಆಸ್ಪತ್ರೆ ವೈದ್ಯಕೀಯ ದಾಖಲೆಗಳ ಡಿಜಿಟಲೀಕರಣ ವ್ಯವಸ್ಥೆ ಒದಗಿಸಲಾಗುತ್ತದೆ. ಹೊರಗುತ್ತಿಗೆ ಸಿಬ್ಬಂದಿಯ ವೇತನ ಹೆಚ್ಚಿಸಲಾಗುತ್ತದೆ’ ಎಂದು ಘೋಷಿಸಿದ್ದಾರೆ.