ಮನೆ ರಾಜಕೀಯ 545 ಪಿಎಸ್ ಐ ಹುದ್ದೆಗೆ ಮರುಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ: ಆರಗ ಜ್ಞಾನೇಂದ್ರ

545 ಪಿಎಸ್ ಐ ಹುದ್ದೆಗೆ ಮರುಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ: ಆರಗ ಜ್ಞಾನೇಂದ್ರ

0

ಬೆಂಗಳೂರು(Bengaluru):  545 ಪಿಎಸ್ ಐ(PSI) ಹುದ್ದೆ(Post) ಪರೀಕ್ಷೆಯನ್ನು(Exam) ಸರ್ಕಾರ (Government) ರದ್ದು(Cancel) ಮಾಡಿದ್ದು, ಮರುಪರೀಕ್ಷೆಯನ್ನು(Re-exam) ನಡೆಸಲಾಗುತ್ತದೆ. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ಗೃಹ ಸಚಿವ(Home minister) ಅರಗ ಜ್ಞಾನೇಂದ್ರ(Araga jnanendra) ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಪಿಎಸ್ ಐ ಪರೀಕ್ಷೆಯನ್ನು ಸರ್ಕಾರ ರದ್ದು ಮಾಡಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪಿಎಸ್ ಐ ಹುದ್ದೆಗೆ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಬೆಂಗಳೂರು ಕೇಂದ್ರದಲ್ಲೂ ಅಕ್ರಮ ಕಂಡು ಬಂದ ಹಿನ್ನೆಲೆ ಮರು ಪರೀಕ್ಷೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಒಟ್ಟು 54 289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರುಪರೀಕ್ಷೆ ನಡೆಸಲಾಗುತ್ತದೆ. ಆರೋಪಿಗಳೀಗೆ ಮರುಪರೀಕ್ಷೆಗೆ ಅವಕಾಶ ನೀಡುವುದಿಲ್ಲ. ಶೀಘ್ರವೇ ಮರುಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಹಿಂದಿನ ಲೇಖನಜೋಡಿ ಹತ್ಯೆ ಪ್ರಕರಣ: ಗ್ರಾಮದ 20 ಜನರ ಬಂಧನ
ಮುಂದಿನ ಲೇಖನಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ತನಿಖೆ ಬಗ್ಗೆ ಖರ್ಗೆ ಅಸಮಾಧಾನ