ಬೆಂಗಳೂರು(Bengaluru): ನಗರದ ಗಾಂಧಿಭವನದಲ್ಲಿ ಸುದ್ಧಿಗೋಷ್ಠಿ ನಡೆಸುತ್ತಿದ್ದ ವೇಳೆ ರೈತನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ ಘಟನೆಯನ್ನು ಕೆಪಿಸಿಸಿ ಆಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಶೀವಕುಮಾರ್ , ರೈತಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡನೀಯ. ರಾಕೇಶ್ ಟಿಕಾಯತ್ ಗೆ ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಆದರೆ ಸರ್ಕಾರ ರಾಕೇಶ್ ಟಿಕಾಯತ್ ಅವರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.