ಮನೆ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​ – ಕ್ರಿಯಾ ಸಮಿತಿ ಅಧ್ಯಕ್ಷ

ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​ – ಕ್ರಿಯಾ ಸಮಿತಿ ಅಧ್ಯಕ್ಷ

0

ದಾವಣಗೆರೆ, ಡಿಸೆಂಬರ್​ 27: ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕಕ್ಕೆ ನಿರ್ಧಾರ ಮಾಡಲಾಗಿದೆ.

Join Our Whatsapp Group

ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಸಾರಿಗೆ ಸಿಬ್ಬಂದಿ ಮೂಲ ವೇತನ ಶೇಕಡಾ 25ರಷ್ಟು ಹೆಚ್ಚಳ ಮಾಡಬೇಕು. ರಾಜ್ಯ ಸರ್ಕಾರ ಸಾರಿಗೆ ಇಲಾಖೆಗೆ 5,010 ಕೋಟಿ ರೂ. ಬಾಕಿ ನೀಡಬೇಕಿದೆ. ಶಕ್ತಿ ಯೋಜನೆ ಬಾಕಿ 2,000 ಕೋಟಿ ರೂ. ಬಿಡುಗಡೆ ಮಾಡುವಂತೆ ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.