ಬೆಂಗಳೂರು(Bengaluru): ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರುಗಳು ಲೆಟರ್ ಹೆಡ್ ಅಥವಾ ವಿಸಿಟಿಂಗ್ ಕಾರ್ಡ್ ಗಳಲ್ಲಿ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸುವಂತಿಲ್ಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದೇಶ ಹೊರಡಿಸಿದೆ.
ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಸ್. ಸತೀಶ್ ಅವರು ಬರೆದಿದ್ದ ಪತ್ರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಹಿಂಬರಹವನ್ನು ನೀಡುವ ಮೂಲಕ ಸ್ಪಷ್ಟಪಡಿಸಿದೆ.














