ಪಾವಗಡ: ಕೋಟಗುಡ್ಡ ಗ್ರಾಮದಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಕೆ ಎಸ್ ಆರ್ ಟಿಸಿ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ
ಪಾವಗಡ ಪಟ್ಟಣದಿಂದ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ ಚಳ್ಳಕೆರೆಯಿಂದ ಪಾವಗಡದ ಕಡೆ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಡುವೆ ನಿಯಂತ್ರಣ ತಪ್ಪಿ ಢಿಕ್ಕಿ ಸಂಭವಿಸಿದೆ.
ಕೆ ಎಸ್ ಆರ್ ಟಿಸಿ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದು 30 ನಿಮಿಷಗಳಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಾರದ ಕಾರಣ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.