ಮನೆ ರಾಜ್ಯ ಮಾಜಿ ಸಚಿವ ನಾಗೇಂದ್ರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ: ಮತ್ತೆ ಸಂಕಷ್ಠ

ಮಾಜಿ ಸಚಿವ ನಾಗೇಂದ್ರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ: ಮತ್ತೆ ಸಂಕಷ್ಠ

0

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಇಡಿ ಮನವಿ ಮಾಡಿತ್ತು. ಅದರಂತೆ ಇಂದು (ಏಪ್ರಿಲ್ 09) ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ( ಅವರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಿಂದ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅಂದು ಸಚಿವರಾಗಿದ್ದ ನಾಗೇಂದ್ರ ಅವರ ಹೆಸರು ಕೇಳಿಬಂದಿತ್ತು. ಹೀಗಾಗಿ ನಾಗೇಂದ್ರ ಅವರು 2024ರ ಜೂನ್ 6ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ಜು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ನಂತರ ನಾಗೇಂದ್ರ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಮತ್ತೆ ಸಚಿವರಾಗಲು ಕಸರತ್ತು ನಡೆಸಿದರು.