ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಬಲವಂತದ ಕ್ರಮಗಳನ್ನು ಕೈಗೊಳ್ಳುವುದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿಧಾನಮಂಡಲದಲ್ಲಿ ಮಂಡಿಸಿ, ಅನುಮೋದನೆ ಪಡೆದುಕೊಂಡಿದ್ದ ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
೨೦೨೫ನೇ ಸಾಲಿನ ಕರ್ನಾಟಕ ಕಿರು ಸಾಲ(ಮೈಕ್ರೋ) ಮತ್ತು ಸಣ್ಣ ಸಾಲ(ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ, ೨೦೨೫ನೇ ಸಾಲಿನ ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ(ತಿದ್ದುಪಡಿ) ವಿಧೇಯಕ, ೨೦೨೫ನೇ ಸಾಲಿನ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ)ವಿಧೇಯಕ, ೨೦೨೫ನೇ ಸಾಲಿನ ಕರ್ನಾಟಕ ಗಿರವಿದಾರರ(ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲ ಅಂಕಿತ ಹಾಕಿದ್ದಾರೆ.
ಜೊತೆಗೆ, ೨೦೨೫ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕಕ್ಕೂ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.