ಮನೆ ರಾಜ್ಯ ಪಿಯುಸಿ ಮತ್ತು ಎಸ್’ಎಸ್’ಎಲ್’ಸಿ ಬೋರ್ಡ್ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಪಿಯುಸಿ ಮತ್ತು ಎಸ್’ಎಸ್’ಎಲ್’ಸಿ ಬೋರ್ಡ್ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

0

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡ ನಂತರ ವಿಲೀನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ.

ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧೇಯಕ ಮಂಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗೂ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದಿದ್ದರು.

ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಾಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದರು.

ಈ ಮೂಲಕ  ಎಸ್’ಎಸ್’ಎಲ್’ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

ಹಿಂದಿನ ಲೇಖನಎಸ್’​ಬಿಐನಲ್ಲಿ 1673ಪಿಒ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಮೋಹನ್ ಭಾಗವತ್ ವಿರುದ್ಧದ ಪ್ರಕರಣ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ