ಮನೆ ರಾಜ್ಯ ಕೆಪಿಟಿಸಿಎಲ್ ನೌಕರರ ಮುಷ್ಕರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ವೇತನ ಪರಿಷ್ಕರಣೆಗೆ ನಿರ್ಧಾರ

ಕೆಪಿಟಿಸಿಎಲ್ ನೌಕರರ ಮುಷ್ಕರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ವೇತನ ಪರಿಷ್ಕರಣೆಗೆ ನಿರ್ಧಾರ

0

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿದೆ.

ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು  ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ.

ಈ ಹಿನ್ನೆಲೆ ಕೆಪಿಟಿಸಿಎಲ್​ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.

ಕೆಪಿಟಿಸಿಎಲ್​ ನೌಕರರ ಬೇಡಿಕೆ ಏನು?

ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು, ಆದರೆ ಅದು ಆಗಿಲ್ಲ, ಹೀಗಾಗಿ ಈ ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು.

ಕೆಪಿಟಿಸಿಎಲ್​ ಹಾಗೂ ಎಸ್ಕಾಂಗಳ ನೌಕರರು ಮತ್ತು ಅಧಿಕಾರಿಗಳ ವೇತನ ಬೇಡಿಕೆ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು ಎಂದು ಬೇಡಿಕೆ ಇಟ್ಟಿದ್ದರು.

ಹಿಂದಿನ ಲೇಖನಮಹಾರಾಷ್ಟ್ರ ಸರ್ಕಾರದಿಂದ ರಾಜ್ಯದ ಸಾರ್ವಭೌಮತೆಗೆ ಧಕ್ಕೆ: ಸಿದ್ದರಾಮಯ್ಯ
ಮುಂದಿನ ಲೇಖನವಿದೇಶಿ ವಕೀಲರು ಮತ್ತು ಕಾನೂನು ಸಂಸ್ಥೆಗಳಿಗೆ ದೇಶದಲ್ಲಿ ಪ್ರವೇಶಾವಕಾಶ ಕಲ್ಪಿಸಿದ ಬಿಸಿಐ