ಮನೆ ರಾಜಕೀಯ ಭ್ರಷ್ಟಾಚಾರ ಪ್ರಕರಣದಲ್ಲಿ ಡಿಕೆಶಿ ತಪ್ಪತಸ್ಥ ಎಂದು ಪರೋಕ್ಷವಾಗಿ ಒಪ್ಪಿಕೊಂಡ ಸರ್ಕಾರ: ಸಿ.ಟಿ. ರವಿ

ಭ್ರಷ್ಟಾಚಾರ ಪ್ರಕರಣದಲ್ಲಿ ಡಿಕೆಶಿ ತಪ್ಪತಸ್ಥ ಎಂದು ಪರೋಕ್ಷವಾಗಿ ಒಪ್ಪಿಕೊಂಡ ಸರ್ಕಾರ: ಸಿ.ಟಿ. ರವಿ

0

ಬೆಂಗಳೂರು:  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಭ್ರಷ್ಟ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ. ಡಿಕೆ ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಹಿಂದಿನ ಲೇಖನದುರ್ಗಾ ದೇವಸ್ಥಾನ ಐಹೊಳೆ
ಮುಂದಿನ ಲೇಖನಎಸ್.ಮನೋಹರ್ ಬಂಧಿಸದಿದ್ದರೆ ಗೃಹ ಸಚಿವರ ಕಚೇರಿ ಎದುರು ಧರಣಿ ಎಚ್ಚರಿಕೆ ನೀಡಿದ ಜೆಡಿಎಸ್