ಬೀದರ್ : ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂಡೆಯಂತೆ ಸುಭದ್ರವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದಾರೆ. ಸಿಎಂ ಹುದ್ದೆ ಬದಲಾವಣೆ ಕುರಿತು ಇಂದು ಮಾಧ್ಯಮಗಳೊಂದಿಗೆ ಹೇಳಿಕೆ ನೀಡಿದ ಅವರು, ಯಾವ ಕಾರಣಕ್ಕೂ ಸರ್ಕಾರ ಅಸ್ಥಿರವಾಗುವುದಿಲ್ಲ. ಐದು ವರ್ಷ ಸಂಪೂರ್ಣವಾಗಿ ಸಿಎಂ ಸಿದ್ಧರಾಮಯ್ಯ ಅವರೇ ಆಡಳಿತ ನಡೆಸಲಿದ್ದಾರೆ ಎಂದರು.
2028 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ನುಡಿದ ಈಶ್ವರ ಖಂಡ್ರೆ ಇದರಲ್ಲಿ ಸಂಶಯವೇ ಇಲ್ಲ ಎಂದರು.
ಸರ್ಕಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದನ್ನು ಖಂಡಿಸಿದ ಈಶ್ವರ ಖಂಡ್ರೆ, ರವಿಕುಮಾರ್ ಗೆ ಯಾವುದೇ ನೈತಿಕ ಜವಾಬ್ದಾರಿ ಇಲ್ಲ. ರವಿಕುಮಾರ್ ವಿಧಾನಪರಿಷತ್ ನಲ್ಲಿ ಇರಬಾರದು. ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.














