ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇದೆ. ಈ ಮೂಲಕ ದರೋಡೆಕೋರರ ರಕ್ಷಣೆಗೆ ನಿಂತಿದೆ. ಕೋರ್ಟ್ ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್ ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಎಂದು ವಾಗ್ದಾಳಿ ನಡೆಸಿದರು