ಮನೆ ರಾಜಕೀಯ ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತಿದೆ ಸರ್ಕಾರದ ನಡೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತಿದೆ ಸರ್ಕಾರದ ನಡೆ: ಮಾಜಿ ಸಿಎಂ ಬೊಮ್ಮಾಯಿ ಟೀಕೆ

0

ಬೆಂಗಳೂರು: ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತೆ ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಈಗ ಚುನಾವಣಾಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಜಾರಿಗೆ ನೆಪ ಹೇಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

Join Our Whatsapp Group

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ರಚನೆಯಾದರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿಲ್ಲ. ಮುಂದಿನ ಸಂಪುಟ ಸಭೆಯಯಲ್ಲಿ ಭರವಸೆ ಈಡೇರಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರ ಏನು ಮಾಡುತ್ತೋ ನೋಡೋಣ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್​ ಪಾಸ್ ನೀಡುತ್ತೇವೆ ಎಂದು ಹೇಳಿದ್ದಾರೆ. ಈಗ ಉಚಿತ ಪ್ರಯಾಣದ ಬಗ್ಗೆ ನೆಪಗಳು ಹೇಳುತ್ತಿದ್ದಾರೆ. ತಮಿಳುನಾಡಿನಿಂದ ಬರುವವರಿಗೆ ನಿಯಮ ಅನ್ವಯಿಸಲ್ಲ ಎಂದಿದ್ದಾರೆ. ಇವರು ತಮಿಳುನಾಡಿನವರು ಎಂದು ಹೇಗೆ ಗುರುತಿಸುತ್ತಾರೆ? ಒಲ್ಲದ ಗಂಡನಿಗೆ ನೂರಾರು ಕುಂಟುನೆಪ ಎಂಬಂತಿದೆ ಸರ್ಕಾರದ ನಡೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.

ಹಿಂದಿನ ಲೇಖನನಾಪತ್ತೆಯಾಗಿದ್ದ ಉದ್ಯಮಿಯ ಶವ ಟ್ರಾಲಿ ಬ್ಯಾಗ್‌ನಲ್ಲಿ ಪತ್ತೆ
ಮುಂದಿನ ಲೇಖನಡಾರ್ಜಿಲಿಂಗ್’ನಲ್ಲಿರುವ ಪ್ರಮುಖ ಪ್ರವಾಸಿ ಆಕರ್ಷಣೆ ಕೇಂದ್ರಗಳ ಮಾಹಿತಿ