ಮನೆ ಸುದ್ದಿ ಜಾಲ ಯಶಸ್ವಿಯಾಗಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಪಿಟಿ ಪರೀಕ್ಷೆ

ಯಶಸ್ವಿಯಾಗಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಪಿಟಿ ಪರೀಕ್ಷೆ

0

ಮೈಸೂರು (Mysuru)-ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಶನಿವಾರ ನಡೆದ ಜಿಪಿಟಿ ಪರೀಕ್ಷೆಯು ಸುಸೂತ್ರವಾಗಿ ನಡೆಸಲಾಯಿತು ಎಂದು ಮೈಸೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರ ರಾಜೇ ಅರಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ ನಡೆದ ಪ್ರಾಥಮಿಕ ಪದವೀಧರ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 8576 ಅಭ್ಯರ್ಥಿಗಳಲ್ಲಿ 5677 ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆಯನ್ನು ಬರೆದಿದ್ದು, 2899 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.

ಪರೀಕ್ಷೆಗಾಗಿ 11 ಮಾರ್ಗಾಧಿಕರಿಗಳ ನೇಮಕ ಮಾಡಿ ಸುಸೂತ್ರವಾಗಿ ಪ್ರಶ್ನೆ ಪತ್ರಿಕೆ ಹಂಚಿಕೆ ಮಾಡಲಾಗಿದ್ದರ ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂಧಿಯನ್ನು ಹಾಗೂ ಆರೋಗ್ಯ ಸಹಾಯಕರನ್ನು ನೇಮಿಸುವುದರ ಮೂಲಕ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿ ಯಶಸ್ವಿಗೊಳಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಪೆಟ್ರೋಲ್‌ 9.5 ರೂ., ಡಿಸೇಲ್‌ 7 ರೂ. ಇಳಿಕೆ
ಮುಂದಿನ ಲೇಖನಗ್ಯಾಸ್‌ ಸಿಲಿಂಡರ್‌ ಮೇಲೆ 200 ರೂ. ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ