ಮೈಸೂರು : ಮೈಸೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದೆ. ಇಬ್ಬರು ಬಾಲಕರು ಕಾವೇರಿ ನದಿಗೆ ಇಳಿದಿದ್ದಾರೆ. ಈ ವೇಳೆ ಬಾಲಕರು ನದಿಯಲ್ಲಿ ಮುಳುಗುತ್ತಿರುವುದನ್ನು ನೋಡಿ ಅವರ ತಾತ ಅವರನ್ನು ರಕ್ಷಣೆ ಮಾಡಲು ನದಿಗೆ ಇಳಿದಿದ್ದಾರೆ. ಈ ವೇಳೆ ಮೂವರು ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಚೌಡಯ್ಯ (70) ಭರತ್ (13) ಧನುಷ್ (10) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತಪಟ್ಟವರು ಟಿ ನರಸೀಪುರದ ತಿರುಮಕೂಡಲಿನ ನಿವಾಸಿಗಳು ಎನ್ನಲಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ತಾತ ಇಳಿದಿದ್ದಾರೆ.
ಇಬ್ಬರು ಮಕ್ಕಳನ್ನು ರಕ್ಷಿಸಲಾಗದೆ ತಾತ ಕೂಡ ನದಿಯಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದರೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಆಗಮಿಸಿ ತಾತ ಮತ್ತು ಮೊಮ್ಮಕ್ಕಳ ಶವವನ್ನು ಮೇಲೆ ತಕ್ಷಣ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.