ಮನೆ ಕ್ರೀಡೆ ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

0

ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 24 ರನ್‌ ಅಂತರದಿಂದ ಗೆಲುವು ಸಾಧಿಸಿತು.

Join Our Whatsapp Group

ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು.175 ರನ್‌ ಗುರಿ ಬೆನ್ನತ್ತಿದ ಪಂಜಾಬ್ 18.2 ಓವರ್‌ ಗಳಲ್ಲಿ 150 ರನ್ ಗಳಿಸಿ ಆಲೌಟ್‌ ಆಯಿತು. ಪ್ರಭಾಸಿಮ್ರಾನ್ ಸಿಂಗ್ 46, ಜಿತೇಶ್ ಶರ್ಮಾ 41 ರನ್ ಗಳಿಸಿದರಾದರೂ ಉಳಿದ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

ಆರ್‌ ಸಿಬಿ ಪರ ಮೊಹಮ್ಮದ್ ಸಿರಾಜ್ 4, ವನಿಂದು ಹಸರಂಗ 2, ವೇಯ್ನ್ ಪಾರ್ನೆಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.ಇದಕ್ಕೂ ಮುನ್ನ ಆರ್‌ಸಿಬಿ ತಂಡದ ಆರಂಭಿಕ ಆಟಗಾರರಾದ ನಾಯಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಮೇತ 59 ರನ್ ಗಳಿಸಿದರು. ಇತ್ತ ಫಫ್‌ ಡುಪ್ಲೆಸಿ 56 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 84 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ದಿನೇಶ್ ಕಾರ್ತಿಕ್ 07, ಮಹಿಪಾಲ್ ಲೋಮ್ರೋರ್ ಔಟಾಗದೆ 06, ಶಹಬಾಜ್ ಅಹ್ಮದ್ ಔಟಾಗದೆ 05 ರನ್ ಗಳಿಸಿದರು.

ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ರನ್ ಖಾತೆ ತೆರೆಯದೆ ನಿರಾಸೆ ಮೂಡಿಸಿದ್ದರು.

ಹಿಂದಿನ ಲೇಖನಅಧಿಕಾರದ ಆಸೆಗಾಗಿ ಶೆಟ್ಟರ್ ಕಾಂಗ್ರೆಸ್ ಗೆ ಹೋಗಿದ್ದಾರೆ: ಕೆ.ಎಸ್. ಈಶ್ವರಪ್ಪ
ಮುಂದಿನ ಲೇಖನಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು: ಕಾಂಗ್ರೆಸ್