ಮನೆ ರಾಷ್ಟ್ರೀಯ ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ: ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ: ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

0

ಪುಲ್ವಾಮಾ (Pulwama): ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು ಗುರುತಿಸಲಾಗಿದೆ.  ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ.

ಪುಲ್ವಾಮಾದ ಗಡೂರ ಗ್ರಾಮದ ಕಾರ್ಮಿಕರ ಟೆಂಟ್‌ನ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ. ಗ್ರೆನೇಡ್ ಸ್ಫೋಟದಿಂದ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,  ಇಬ್ಬರು ಗಾಯಗೊಂಡಿದ್ದಾರೆ. ಕಾರ್ಮಿಕರು ಹತ್ತಿ ಹಾಸಿಗೆಗಳನ್ನು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನಮೂಡ್‌ ಆಫ್‌ ಅನ್ನು ತಡೆಯಲು ಈ ಯೋಗಾಸನಗಳು ಸಹಕಾರಿ
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ