ಮನೆ ರಾಜಕೀಯ ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

0

ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Join Our Whatsapp Group

ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು.

ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್​ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗೃಹ ಲಕ್ಷ್ಮೀ ಯೋಜನೆ ಮುಖ್ಯಾಂಶಗಳು

ಜೂನ್ 15ರಿಂದ ಜುಲೈ 15ರ ಒಳಗೆ ಅರ್ಜಿ ನೀಡಬೇಕು.

ಆನ್ ​ಲೈನ್ ಮೂಲಕ ಅರ್ಜಿಗಳನ್ನು ತಲುಪಿಸಬೇಕು.

ಜುಲೈ 15ರಿಂದ ಆಗಸ್ಟ್ 15 ರ ಒಳಗೆ ಅರ್ಜಿಗಳನ್ನು ಪರಿಶೀಲಿಸಿ ಆಗಸ್ಟ್ 15ರಂದು ಯೋಜನೆ ಜಾರಿಗೊಳಿಸುತ್ತೇವೆ.

ಅರ್ಜಿಯಲ್ಲಿ ಕೊಟ್ಟ ಮಾಹಿತಿಯ ಆಧಾರದಲ್ಲಿ ಯೋಜನೆ ಜಾರಿಗೊಳಿಸಲಾಗುವುದು

ಪರಿಶೀಲನೆ ಪ್ರಕ್ರಿಯೆಗೆ ಸಮಯ ತೆಗೆದುಕೊಳ್ಳುವುದರಿಂದ ಈ ತಿಂಗಳಿನಿಂದಲೇ ಜಾರಿಗೆ ತರಲಾಗದು

ಹಿಂದಿನ ಲೇಖನ2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’: ತೃತೀಯ ಲಿಂಗಿಗಳಿಗೂ ಅನ್ವಯ
ಮುಂದಿನ ಲೇಖನಬೆಂಗಳೂರಿನಿಂದ ಸೋಲೊ ಟ್ರಿಪ್ ಮಾಡಲು ಈ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಿ