ಮೈಸೂರು: ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ನಗರ ಪಾಲಿಕೆ ವ್ಯಾಪ್ತಿಯ 6ನೇ ವಲಯ ಕಚೇರಿ ಸೇರಿದಂತೆ ನೋಂದಣಿ ಹಾಗೂ ನಗರದ ವಿವಿಧ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ವಲಯ ಕಚೇರಿ ಸೇರಿದಂತೆ ಸಿದ್ದಲಿಂಗಪುರದ ಗ್ರಾಮಪಂಚಾಯಿತಿ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರು ಸಹ ಯಾವುದೇ ಆಂತಕಕ್ಕೊಳಗಾಗಬಾರದು. ನೋಂದಣಿಗೆ ಯಾವುದೇ ಅಂತಿಮ ದಿನಾಂಕವಿರುವುದಿಲ್ಲ. ಯಾವುದೇ ದಿನಾಂಕದಂದು ಸಹ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪ್ರತಿ ಫಲಾನುಭವಿಗೆ ಸಮಯ ನಿಗದಿಪಡಿಸಲಾಗಿರುತ್ತದೆ. ನಿಗದಿತ ಸಮಯದಲ್ಲಿ ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ಹೋಗಿ ಯಜಮಾನಿ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಪುಸ್ತಕ ಹಾಗೂ ಯಜಮಾನಿ ಗಂಡನ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.