ಬೆಂಗಳೂರು : ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಆಪ್ ಬಗ್ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸಚಿವ ಸಂಪುಟ ಮಹತ್ವ ಸಭೆಯಲ್ಲಿ ಗೃಹಲಕ್ಷ್ಮಿ ಆಪ್ ಅನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಗೃಹಲಕ್ಷ್ಮಿ ಯೋಜನೆಯ ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು .ಈ ಸಲುವಾಗಿಯೇ ಇಂದು ನಡೆದ ಮಹತ್ವದ ಸಭೆಯಲ್ಲಿ ಗೃಹಲಕ್ಷ್ಮಿ ಹಬ್ಬಕ್ಕೆ ಚರ್ಚೆ ಆಗಿದ್ದು . ನಾನು ಸಿ.ಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಭೆಯಲ್ಲಿ ಸೇರಿದ್ದ ಸಚಿವರಿಗೂ ಗೃಹಲಕ್ಷ್ಮಿ ಆಪ್ ಬಗ್ಗೆ ಮಾಹಿತಿಯನ್ನು ನೀಡಿದ್ದೆ. ಮಾಹಿತಿಯನ್ನು ನೀಡಿದ ಬಳಿಕ ಗೃಹಲಕ್ಷ್ಮಿ ಆಪ್ ಗೆ ಗ್ರೀನ್ ಸಿಗ್ನಲ್ ನೀಡಲಾಯಿತು.
ಆದರೆ ಅರ್ಜಿ ಸಲ್ಲಿಸುವ ದಿನಾಂಕ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿ ಸಿಕ್ಕಿಲ್ಲ, ಆದರೆ ಆಗಸ್ಟ್ ನಲ್ಲಿ ಮಹಿಳೆಯರ ಖಾತೆಗೆ ಹಣವನ್ನು ನೀಡುವ ಸಾಧ್ಯತೆಗಳಿದ್ದು. ಎಂದು ಮಾಧ್ಯಮಗಳ ಮುಂದೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.