ಮೈಸೂರು: ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸುವ ಸಲುವಾಗಿ ಶಾಸಕ ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸೂಚನೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಪತ್ರ ಬರೆದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮುನ್ನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಎರಡು ಸಾವಿರ ರೂಪಾಯಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಜಮೆ ಮಾಡಲು ದಿನೇಶ್ ಗೂಳಿಗೌಡ ಮನವಿ ಮಾಡಿದ್ದರು.
ಮನವಿ ಪತ್ರಕ್ಕೆ ತಕ್ಷಣ ಸ್ಪಂದಿಸಿರುವ ಡಿ ಕೆ ಶಿವಕುಮಾರ್ ಲಕ್ಷ್ಮಿ ಹೆಬ್ಬಾಳ್ಕರ ರವರಿಗೆ ತಮ್ಮ ಇಲಾಖೆಯಿಂದ ಅಥವಾ ವಯಕ್ತಿಕವಾಗಿ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿಗಳನ್ನು ದೇವಿಗೆ ಜಮೆ ಮಾಡಲು ಸೂಚನೆ ನೀಡಿದ್ದಾರೆ.