ಮನೆ ಕ್ರೀಡೆ GT vs CSK: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

GT vs CSK: ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

0

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ 2023 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಿದೆ.

Join Our Whatsapp Group

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಿದರೆ, ಸೋತ ತಂಡವು 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಡನೆ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡವು 2ನೇ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಆಡಿದ 2 ತಂಡಗಳೇ ಫೈನಲ್​ಗೆ ಪ್ರವೇಶಿಸಿದರೂ ಅಚ್ಚರಿಪಡಬೇಕಿಲ್ಲ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾನ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಹಿಂದಿನ ಲೇಖನಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಪಡೆಯುತ್ತಿದ್ದ ಪಶುವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಮುಂದಿನ ಲೇಖನ25 ಕೋಟಿ ರೂ. ಮೌಲ್ಯದ ತಿಮಿಂಗಿಲದ ವಾಂತಿ ಮಾರಾಟಕ್ಕೆ ಯತ್ನ: ಕೇರಳ ಮೂಲದ ಮೂವರ ಬಂಧನ