ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹಣಕಾಸು ಸಚಿವಾಲಯದ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ. ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಆಯಾ ಸಚಿವರು ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದರು.