ಮನೆ ರಾಜಕೀಯ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳು ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

0

ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಉಪ ಮುಖ್ಯ ಮಂತ್ರಿ  ಡಿ.ಕೆ. ಶಿವಕುಮಾರ್ ಹೇಳಿದರು.

Join Our Whatsapp Group

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಹಣಕಾಸು ಸಚಿವಾಲಯದ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.

ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ. ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಆಯಾ ಸಚಿವರು ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದರು.

ಹಿಂದಿನ ಲೇಖನಜನರು ಸಿಡಿದೇಳುವ ಮುನ್ನ ಗ್ಯಾರಂಟಿಗಳನ್ನು ಜಾರಿ ಮಾಡಿ: ಸಿ.ಟಿ ರವಿ
ಮುಂದಿನ ಲೇಖನಗ್ಯಾರಂಟಿಗಳು ಏಕಕಾಲದಲ್ಲಿ ಜಾರಿಗೆ ಬರಲಿವೆ: ಸಚಿವ ಶಿವಾನಂದ ಪಾಟೀಲ್