ಮನೆ ರಾಜ್ಯ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಸರ್ಕಾರದಿಂದ ಮಾರ್ಗಸೂಚಿ

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸಲು ಸರ್ಕಾರದಿಂದ ಮಾರ್ಗಸೂಚಿ

0

ಬೆಂಗಳೂರು (Bengaluru)- ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಹೊರಡಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು, 2000, ನಿಯಮ 3(1) ಅಡಿಯಲ್ಲಿ ಹೇಳಿರುವಂತೆ ‘ಹಗಲಿನ ಸಮಯ’ ಎಂದರೆ ಬೆಳಿಗ್ಗೆ 6 ರಿಂದ 10 ರವರೆಗೆ ಬಳಸಬಹುದು. ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ. ಉಳಿದ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದಿರಬೇಕು.

ಧ್ವನಿವರ್ಧಕಗಳು ಅಥವಾ ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಬಳಕೆದಾರರು 15 ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಪಡೆಯದವರು ಸ್ವಯಂ ಪ್ರೇರಣೆಯಿಂದ ತೆಗೆದುಹಾಕಬೇಕು ಅಥವಾ ಗೊತ್ತುಪಡಿಸಿದ ಪ್ರಾಧಿಕಾರವು ತೆಗೆದುಹಾಕಲು ಕ್ರಮ ತೆಗೆದುಕೊಳ್ಳಬೇಕು. ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಲ್ಲ ಪೊಲೀಸ್ ಕಮಿಷನರೇಟ್ ಪ್ರದೇಶಗಳಲ್ಲಿ – ಸಹಾಯಕ ಪೊಲೀಸ್ ಕಮಿಷನರ್ ಜುರಿಸ್ಡಿಕ್ಷನಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿ ಇತರ ಪ್ರದೇಶಗಳಲ್ಲಿ ಡಿವೈಎಸ್‌ಪಿ,ತಹಶೀಲ್ದಾರ್‌ ಅವರಿಂದ ಅನುಮತಿ ಪಡೆಯಬಹುದು.

ಲೌಡ್ ಸ್ಪೀಕರ್‌ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಇದು ಅನ್ವಯಿಸುತ್ತದೆ. ಇದನ್ನು ತಕ್ಷಣದ ಪರಿಣಾಮದೊಂದಿಗೆ ಕಾರ್ಯಗತಗೊಳಿಸಲು ಅಗತ್ಯವಿರುವ ಸರ್ಕಾರಿ ನಿರ್ದೇಶನಗಳನ್ನು ಸಂಬಂಧಪಟ್ಟವರಿಗೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಎಸ್‌. ಬೊಮ್ಮಾಯಿ ಅವರು, ಈ ಕುರಿತು ತೀರ್ಮಾನಕ್ಕೆ ಬರುವ ಸಲುವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿ ಹಾಗೂ ಐಜಿಪಿ, ಹೆಚ್ಚುವರಿ ಅಡ್ವೊಕೇಟ್ ಜನರಲ್,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿದ್ದರು.

ಈ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಂ ಕೋರ್ಟ್‌ ಹೊರಡಿಸಿರುವ ಆದೇಶ, ರಾಜ್ಯ ಸರ್ಕಾರವು ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ರೂಪಿಸಿರುವ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಆ ಬಳಿಕ ಇಲ್ಲಿ ಹೇಳಿರುವ ಅಂಶಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಆದೇಶ ನೀಡಿದ್ದಾರೆ.

ಹಿಂದಿನ ಲೇಖನಬಿಬಿಎಂಪಿ ಚುನಾವಣೆಗೆ ಸದ್ಯದಲ್ಲೇ ಮೂಹೂರ್ತ ನಿಗದಿ
ಮುಂದಿನ ಲೇಖನಡಿಜಿಪಿ ಹುದ್ದೆಗೆ ಡಾ.ಪಿ.ರವೀಂದ್ರನಾಥ್‌ ರಾಜೀನಾಮೆ