ಮನೆ ರಾಜ್ಯ ಗುಜರಾತ್ ಚುನಾವಣಾ ಫಲಿತಾಂಶ ರಾಜಕೀಯ ಬುಡಮೇಲು ಮಾಡಿದೆ: ಬಿ. ಎಸ್‌ ಯಡಿಯೂರಪ್ಪ

ಗುಜರಾತ್ ಚುನಾವಣಾ ಫಲಿತಾಂಶ ರಾಜಕೀಯ ಬುಡಮೇಲು ಮಾಡಿದೆ: ಬಿ. ಎಸ್‌ ಯಡಿಯೂರಪ್ಪ

0

ಬೆಂಗಳೂರು(Bengaluru): ಗುಜರಾತ್‌ ಚುನಾವಣಾ ಫಲಿತಾಂಶವು ಜಾತಿ ಮತ್ತು ಧರ್ಮ ಆಧಾರಿತ ಏಲ್ಲ ರಾಜಕೀಯ ಬುಡಮೇಲು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ ಅವರು ಹೇಳಿದ್ದಾರೆ.

ಗುಜರಾತ್‌’ನಲ್ಲಿ ಬಿಜೆಪಿ ಭಾರಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮತದಾರರು ರಾಜ್ಯದ ಹಾಗೂ ದೇಶದ ಅಭಿವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ. ಇದಕ್ಕಾಗಿ ಮತದಾರರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರದಿಂದ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂಬುದು ಫಲಿತಾಂಶದಿಂದ ಸಾಬೀತಾಗಿದೆ. ಗುಜರಾತ್‌ ಚುನಾವಣೆಯ ಫಲಿತಾಂಶವು ದಾಖಲೆಯನ್ನು ಸೃಷ್ಟಿಸಿದ್ದು, ಆ ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದ ಖ್ಯಾತಿಯನ್ನು ಭಾರತೀಯ ಜನತಾ ಪಕ್ಷಕ್ಕೆ ಲಭಿಸಿದೆ ಎಂದಿದ್ದಾರೆ.

ಯಾರೂ ಏನೆ ಮಾತನಾಡಿದರೂ, ರಾವಣ, ಭಸ್ಮಾಸುರ ಎಂಬೆಲ್ಲ ವಿಶ್ಲೇಷಣೆಗಳನ್ನು ಮಾಡಿ, ನರೇಂದ್ರ ಮೋದಿ ಅವರ ವ್ಯಕ್ತಿತ್ವವನ್ನು ಹಾಳುಗೆಡವಬಹುದು ಎಂಬ ಭ್ರಮೆಯಲ್ಲಿದ್ದ ವಿರೋಧ ಪಕ್ಷಗಳಿಗೆ ದೇಶದ ಜನರು ತಕ್ಕ ಪಾಠ ಕಲಿಸಿದ್ದಾರೆ. ಮೋದಿ ಅವರ ನೇತೃತ್ವದಲ್ಲಿ ದೇಶವು ಸುಭದ್ರವಾಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದೆ. ವಿಶ್ವಗುರುವಾಗುವತ್ತ ದಾಪುಗಾಲಿಡುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿಯೂ ಸಹ ಭಾರತೀಯ ಜನತಾ ಪಕ್ಷವು ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ. ವಿರೋಧ ಪಕ್ಷಗಳು ಇನ್ನಾದರೂ ಅಧಿಕಾರದ ಹಗಲು ಕನಸು ಕಾಣುವುದನ್ನು ಬಿಟ್ಟು ಹಾಗೂ ಪ್ರಧಾನಿಗಳ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ನೀಡಲು ಸಲಹೆ ನೀಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.