ಮನೆ ರಾಷ್ಟ್ರೀಯ ಗುಜರಾತ್ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮೋದಿ

ಗುಜರಾತ್ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮೋದಿ

0

ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.


ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ ವಿಶೇಷವಾಗಿಯೂ ಯುವ ಮತದಾರರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮನವಿ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಅಹಮದಾಬಾದ್‌’ನ ರಾಣಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿ ಮತ ಚಲಾಯಿಸಿದರು.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶಿಲಾಜ್ ಅನುಪಮ್ ಶಾಲೆಯ ಬೂತ್ ಸಂಖ್ಯೆ 95ರಲ್ಲಿ ಮತದಾನ ಮಾಡಿದರು. ಗೃಹ ಸಚಿವ ಅಮಿತ್ ಶಾ ಸಹ ಇಂದು ಮತ ಚಲಾಯಿಸಲಿದ್ದಾರೆ.
ಗುಜರಾತ್ ವಿಧಾನಸಭೆಯ 93 ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ.
ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರ ಹಾಗೂ ಐದು ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯುತ್ತಿದೆ.

ಹಿಂದಿನ ಲೇಖನಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿದೆ ಉದ್ಯೋಗಾವಕಾಶ
ಮುಂದಿನ ಲೇಖನಸರಕು ಸಾಗಣೆ ಆಟೋ ಪಲ್ಟಿ: ಮೂವರು ಸಾವು