ಮನೆ ಅಪರಾಧ ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

0

ಗುಂಡ್ಲುಪೇಟೆ(ಚಾಮರಾಜನಗರ): ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Join Our Whatsapp Group

ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವಮ್ಮ ಹಾಗೂ ದೇವಮ್ಮ ಅವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು 10 ಕುರಿಗಳು ಸಾವನ್ನಪ್ಪಿದೆ.

ಮಾಲೀಕರು ಎಂದಿನಂತೆ ಮಲ್ಲಯ್ಯನಪುರ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. ಆದರೆ ವಿಷಕಾರಿ ಸೊಪ್ಪು ತಿಂದ 10 ಕುರಿಗಳು ಜಮೀನೊಂದರಲ್ಲಿ ಸಾವನ್ನಪ್ಪಿದೆ. ಇನ್ನು ಮೂರು ಕುರಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಒತ್ತಾಯ:

ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೇ ನಂಬಿ ಜೀವನ ನಡೆಸುತ್ತಿದ್ದರು. ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಹಾಗೂ ಶಿವಣ್ಣ ಒತ್ತಾಯಿಸಿದ್ದಾರೆ.

ಹಿಂದಿನ ಲೇಖನಮಡಿಕೇರಿ: ಮೀನಾ ಹಂತಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಮುಂದಿನ ಲೇಖನಹಾಸನ: ದೇವರಾಜೇಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು