ಮನೆ ರಾಜ್ಯ ಗುಂಡ್ಲುಪೇಟೆ: ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಗುಂಡ್ಲುಪೇಟೆ: ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

0

ಗುಂಡ್ಲುಪೇಟೆ: ಹೃದಯಾಘಾತದಿಂದ ವಿಧ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಐ ಕ್ರಿಶ್ಚಿಯನ್ ಹಾಸ್ಟೆಲ್ ನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಫೆಲಿಶಾ(17) ಮೃತ ಬಾಲಕಿ. ಸಿಎಂಐ ಹಾಸ್ಟೆಲ್ ನಲ್ಲಿದ್ದುಕೊಂಡು ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಲಿಶಾ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಚರ್ಚ್ ನಲ್ಲಿ ಪ್ರಾರ್ಥನೆ ಸಮಯದಲ್ಲಿ ಫೆಲಿಶಾ ಕುಸಿದು ಬಿದ್ದಿದ್ದು ತಕ್ಷಣ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ದಾಖಲು ಮಾಡಲಾಗಿತ್ತು.

ಆದರೆ ವಿದ್ಯಾರ್ಥಿನಿ ಫೆಲಿಶಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಶವ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ.

ಹಿಂದಿನ ಲೇಖನಹುಬ್ಬಳ್ಳಿ-ಧಾರವಾಡದ  ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ರೇಣುಕಾ ಕೆ ಸುಕುಮಾರ್ ನೇಮಕ
ಮುಂದಿನ ಲೇಖನಸಂತೋಷದ ಸ್ವರೂಪ !