ಗದಗ: ಹಣಕಾಸಿನ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈನುದ್ದಿನ್, ಇರ್ಫಾನ್, ಶಾಬುದ್ದೀನ್,ಸಬೀರ್,ನೌಶಾದ್, ಸುಲೇಮಾನ ಹಾಗೂ ಅಬ್ದುಲ್ ಸತ್ತಾರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಣ್ಣಪುಟ್ಟ ಗಾಯಗಳಾಗಿರುವವರಿಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.