ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯದ ಕಾರಣ ಅಗತ್ಯ ಚಿಕಿತ್ಸೆ ಹಿನ್ನೆಲೆಯಲ್ಲಿ ಬುಧವಾರ ಚೆನ್ನೈಗೆ ತೆರಳಿದ್ದಾರೆ.
ಚಿಕಿತ್ಸೆಗಾಗಿ ಇಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡಿದ್ದರು.















