ಮನೆ ರಾಜಕೀಯ ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ಟಾಂಗ್

0

ಮೈಸೂರು(Mysuru): ಬಿಜೆಪಿ ಸರ್ಕಾರವೇ ಅಸಮರ್ಥ ಸರ್ಕಾರ. ಮುಖ್ಯಮಂತ್ರಿಗಳು ಯಾರನ್ನೋ ಮೆಚ್ಚಿಸಲು ಅಲ್ಲ. ಜನರನ್ನು ಮೆಚ್ಚಿಸಲು ಅಧಿಕಾರ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.

ದೆಹಲಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಮನೆಗಳನ್ನು ಬುಲ್ಡೋಜರ್ ನಿಂದ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ಅಕ್ರಮ ಕಟ್ಟಡಗಳ ಮಾಹಿತಿ ನೀಡುತ್ತೇನೆ. ಬಿಜೆಪಿಯ ನಾಯಕರು, ಮೋದಿ ಅವರು ಅದನ್ನು ತೆರವುಗೊಳಿಸಲು ಸಿದ್ದರಿದ್ದೀರಾ.? ಮೈಸೂರಿನಲ್ಲೂ ಮಾಹಿತಿ ಕೊಡುತ್ತೇನೆ., ನೈಸ್‌ ಗೆ ರೆಡ್ ಕಾರ್ಪೆಟ್ ಹಾಕಿ ಭೂಮಿ ನೀಡಿದ್ದೀರಾ.ಸರ್ಕಾರದ ಭೂಮಿಗೆ ನೈಸ್ ಕಂಪನಿಗೆ 100 ಕೋಟಿ ಕೊಟ್ಟು ಖರೀದಿ ಮಾಡಿದ್ದೀರಾ ಎಂದು ಆರೋಪ ಮಾಡಿದರು.

ಗಲಭೆ ಮಾಡಿದವರ ಆಸ್ತಿ ಬುಲ್ಡೋಜ್ ಮಾಡಬೇಡಿ. ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ. ಬುಲ್ಡೋಜ್ ಮಾಡಿದರೆ ಯಾರಿಗೂ ಲಾಭ ಇಲ್ಲ. ಸಂಪತ್ತು ಲೂಟಿ ಮಾಡಿರುವವರ ಬೆಂಕಿ ಹಚ್ಚುವವರ ವಿರುದ್ದ ಕಾರ್ಯಾಚರಣೆ ಮಾಡಿ ಎಂದು ಆಗ್ರಹಿಸಿದರು.

ಆಜಾನ್ ಡೆಡ್‌ ಲೈನ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ಅವರ ನಿರ್ದೇಶನದಂತೆ ನೀವು ಅಧಿಕಾರ ಮಾಡುತ್ತಿದ್ದೀರಾ. ನನಗೆ ಈ ಬಗ್ಗೆ ಮಾತನಾಡಬೇಡಿ ಅಂತಾ ಹೇಳಿದ್ದಾರೆ. ಆದರೆ ನಾನು ಈ ವಿಚಾರವಾಗಿ ಮಾತನಾಡಿಯೇ ತೀರುತ್ತೇನೆ. ನನಗೆ ಚುನಾವಣೆ ಮುಖ್ಯವಲ್ಲ ಜನರ ಹಿತ ಮುಖ್ಯ ಎಂದರು.

ಹಿಂದಿನ ಲೇಖನದ್ವಾದಶ ರಾಶಿಗಳ ಭವಿಷ್ಯ
ಮುಂದಿನ ಲೇಖನಪ್ರೊ.ನಂಜುಂಡಸ್ವಾಮಿ ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅಗತ್ಯ: ಸಿದ್ದರಾಮಯ್ಯ