ಮನೆ ರಾಜ್ಯ ಮುಡಾ ನಾಮನಿರ್ದೇಶಿತ ಸದಸ್ಯರಾಗಿ ಹೆಚ್.ವಿಶ್ವನಾಥ್ ನೇಮಕ

ಮುಡಾ ನಾಮನಿರ್ದೇಶಿತ ಸದಸ್ಯರಾಗಿ ಹೆಚ್.ವಿಶ್ವನಾಥ್ ನೇಮಕ

0

ಮೈಸೂರು(Mysuru): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ನೇಮಕವಾಗಿದ್ದಾರೆ.

ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ,1987ರ ಕಲಂ3(3)(ಡಿ) ರನ್ವಯ ಕಲಂ.3(4)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್ ಅವರನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಿಂದಿನ ಲೇಖನತೆರಿಗೆ ವಂಚನೆ ಆರೋಪ: ಬೆಂಗಳೂರಿನ ವಿವಿದೆಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ
ಮುಂದಿನ ಲೇಖನತಿ.ನರಸೀಪುರ ಚಿರತೆ ಸೆರೆಹಿಡಿಯುವ ಕಾರ್ಯಚರಣೆಗೆ ಥರ್ಮಲ್‌ ಡ್ರೋನ್‌ ಕ್ಯಾಮೆರಾ ಬಳಕೆ