ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೃತ ಕಂಡಕ್ಟರ್ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು(ಜು.21) ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.