ಮನೆ ಅಪರಾಧ ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್

ಧಾರ್ಮಿಕ ಭಾವನೆಗೆ ಧಕ್ಕೆ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್

0

ಸಾಗರ(Sagar): ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಬುಧವಾರ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಹೊರಡಿಸಿತ್ತು.

ಸಮನ್ಸ್ ಜಾರಿಯಾದರೂ ಬುಧವಾರ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ.