ಮಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯು ಎಲ್ಲಾ ಜಿಲ್ಲೆಗಳಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಕ್ರಮ ಕೈಗೊಂಡಿದೆ. ಅಲ್ಲದೆ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ದರ ವಿಧಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘಿ ಟೆಸ್ಟಿಂಗ್ ದರ ಹೆಚ್ಚಿಸಿದರೆ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿವೆ.ಅದನ್ನು ಮೊದಲು ನಿಯಂತ್ರಿಸಬೇಕು. ಜನರು ಗಂಭೀರವಾಗಿ ಇದನ್ನು ಪರಿಗಣಿಸಿಲ್ಲ.ಡೆಂಗಿ ಪ್ರಕರಣದಲ್ಲಿ ಸೂಕ್ತ ಚಿಕಿತ್ಸೆ ಕೊಡುವ ವ್ಯವಸ್ಥೆ ಆಗಿದೆ ಎಂದು ತಿಳಿಸಿದರು.
ಇನ್ನೂ ಕಳೆದ ೨೪ ಗಂಟೆಯಲ್ಲಿ ಬೆಂಗಳೂರಿನಲ್ಲೇ ೧೫೩ ಪ್ರಕರಣಗಳು ಪತ್ತೆಯಾಗಿದ್ದು ,ಒಟ್ಟು ಪ್ರಕರಣ ಸಂಖ್ಯೆ ೫೪೭ ಕ್ಕೆ ಏರಿಕೆ ಕಂಡಿದೆ. ಇನ್ನು ಹಾಸನದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಆರು ಮಕ್ಕಳು ಡೆಂಗ್ಯೂ ಸೋಂಕಿನಿಂದ ಸಾವನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.