ಮನೆ ಅಪರಾಧ ಹರ್ಷ ಹತ್ಯೆ ಪ್ರಕರಣ: ಇಬ್ಬರ ಬಂಧನ

ಹರ್ಷ ಹತ್ಯೆ ಪ್ರಕರಣ: ಇಬ್ಬರ ಬಂಧನ

0

ಶಿವಮೊಗ್ಗ:  ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಾನುವಾರ ಬಮದಿಸಿರುವುದಾಗಿ ಶಿವಮೊಗ್ಗ ಎಡಿಜಿಪಿ ಎಸ್ ಮುರುಗನ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು ಬೆಳಗ್ಗೆಯಿಂದ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಖುದ್ದು ನಾನೇ ರಸ್ತೆಗಳಿದು ಪರಿಶೀಲನೆ ಮಾಡುತ್ತಿದ್ದೇನೆ. ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇಬ್ಬರನ್ನು ಬಂಧಿಸಿದ್ದು ಇನ್ನುಳಿದವರಿಗಾಗಿ ಬಲೆ ಬೀಸಿದ್ದು, ಶೀಘ್ರವೇ ಬಂಧಿಸುತ್ತೇವೆ ಎಂದರು.

ಸ್ಥಳದಲ್ಲಿ ಪೊಲೀಸರು, ಆರ್ ಎಎಫ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಆಸ್ತಿ, ಪಾಸ್ತಿ ಹಾನಿ ಮಾಡಿದವರ ಮೇಲೆ ಪ್ರತ್ಯೇಕ ಕೇಸು ಹಾಕಲಾಗುವುದು ಎಂದರು.

ಕೊಲೆಗೀಡಾದ ಹರ್ಷ ಅವರ ತಾಯಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.

ಹಿಂದಿನ ಲೇಖನಹಿಜಾಬ್ ವಿವಾದ: ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್
ಮುಂದಿನ ಲೇಖನಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ 5 ವರ್ಷ ಜೈಲು, 60 ಲಕ್ಷ  ರೂ ದಂಡ