ಚಿಕ್ಕಮಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಷ್ಠಾವಂತರ ಕಾರ್ಯಕರ್ತರಿಗೇ ಟಿಕೆಟ್ ನೀಡುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು.
ಬೀರೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜೆಡಿಎಸ್ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈಗಾಗಲೇ ಟಿಕೆಟ್ ಘೋಷಿಸಿರುವ ಅಭ್ಯರ್ಥಿ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿಲ್ಲದಿದ್ದರೆ ಕರೆಸಿ ಚರ್ಚಿಸುತ್ತೇನೆ. ಬದಲಾವಣೆ ಮಾಡಬೇಕಾದ ಸ್ಥಿತಿ ಇದ್ದರೆ ಮಾಡುತ್ತೇವೆ ಎಂದು ತಿಳಿಸಿದರು.
ವೈಎಸ್ವಿ ದತ್ತ ಅವರ ಬಗ್ಗೆ ನನಗೆ ಗೊತ್ತಿಲ್ಲ. ಅವರೆಲ್ಲ ದೊಡ್ಡವರು. ನಮ್ಮದ ಸಣ್ಣ ಪಕ್ಷ. ಅವರು ಇಂಟರ್ ನ್ಯಾಷನಲ್ ಪಕ್ಷ ಸೇರಲು ಹೋದವರು. ನಮ್ಮ ಪಕ್ಷದಲ್ಲಿ ಅವರಿಗೇನು ಸಿಗುತ್ತದೆ ಎಂದು ಛೇಡಿಸಿದರು.