ಮನೆ ಅಪರಾಧ ಹಾಸನ: ಕೊರಿಯರ್ ಶಾಪ್’ನಲ್ಲಿ ಮಿಕ್ಸಿ ಬ್ಲಾಸ್ಟ್- ಮಾಲೀಕನಿಗೆ ಗಂಭೀರ ಗಾಯ

ಹಾಸನ: ಕೊರಿಯರ್ ಶಾಪ್’ನಲ್ಲಿ ಮಿಕ್ಸಿ ಬ್ಲಾಸ್ಟ್- ಮಾಲೀಕನಿಗೆ ಗಂಭೀರ ಗಾಯ

0

ಹಾಸನ(Hassan): ಕೊರಿಯರ್ ಶಾಪ್​​’ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ನಡೆದಿದೆ.

ಸೋಮವಾರ ರಾತ್ರಿ ಕೊರಿಯರ್’ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಎಸ್​’ಪಿ ಹರಿರಾಮ್ ಶಂಕರ್, ಗಾಯಾಳುವಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಮಿಕ್ಸಿ ಬ್ಲೇಡ್ ತಾಗಿ ಅವರಿಗೆ ಪೆಟ್ಟಾಗಿದೆ. ಮೈಸೂರಿನಿಂದ ಎಫ್’ಎಸ್’ಎಲ್ ತಂಡ ಆಗಮಿಸಿ, ಪರಿಶೀಲನೆ ನಡೆಸಲಿದೆ. ಕೊರಿಯರ್ ಎಲ್ಲಿಂದ ಬಂತು ಅನ್ನೋ ಮಾಹಿತಿ ಇದೆ. ಯಾವುದೇ ಊಹಾಪೋಹ, ಗೊಂದಲ ಬೇಡ. ಪರಿಶೀಲನೆ ನಡೆಸುತ್ತಿದ್ದೇವೆ. ಎಫ್’ಎಸ್’ಎಲ್ ನೀಡುವ ವೈಜ್ಞಾನಿಕ ಸಾಕ್ಷ್ಯಾಧಾರದ ಆಧರಿಸಿ ತನಿಖೆ ಮುಂದುವರಿಸಲಾಗುತ್ತದೆ ಎಂದರು.

ಏನಿದು ಘಟನೆ ? :

ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್’​ಗೆ ಬಂದಿದ್ದ ಪಾರ್ಸೆಲ್ ಅನ್ನು ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಿದ್ದರು. ಆದರೆ ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ಕೊರಿಯರ್​’ಗೆ ವಾಪಸ್ ನೀಡಿದ ವ್ಯಕ್ತಿ, ವಾಪಸ್ ಪಡೆಯುವ ವೇಳೆ ಘಟನೆ ಸಂಭವಿಸಿದೆ.

ಬ್ಲಾಸ್ಟ್ ಹಿನ್ನೆಲೆಯಲ್ಲಿ ಕೊರಿಯರ್​’ನ ಹಲವು ವಸ್ತುಗಳಿಗೆ ಹಾನಿಯಾಗಿದೆ. ಕೆ ಆರ್ ಪುರಂ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.