ಮನೆ ರಾಜ್ಯ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್ ​ಡಿ ಕುಮಾರಸ್ವಾಮಿ

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್ ​ಡಿ ಕುಮಾರಸ್ವಾಮಿ

0

ಮೈಸೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ನನ್ನ ಸಂಪರ್ಕದಲ್ಲಿ ಇಲ್ಲ. ಆತ ಮೊದಲಿನಿಂದಲೂ ಪಕ್ಷದ ಚಟುವಟಿಕೆಗಳ ಸಂದರ್ಭದಲ್ಲಿಯೂ ನನ್ನ ಸಂಪರ್ಕದಲ್ಲಿ ಇರಲಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು.

Join Our Whatsapp Group

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿದ್ದಾಗಲೇ ನನ್ನ ಸಂಪರ್ಕದಲ್ಲಿರದ ಪ್ರಜ್ವಲ್ ವಿದೇಶದಲ್ಲಿರುವಾಗ ಹೇಗೆ ನನ್ನ ಜೊತೆ ಸಂಪರ್ಕದಲ್ಲಿರುತ್ತಾನೆ ಎಂದು ಪ್ರಶ್ನಿಸಿದರು.

ಇನ್ನು ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ದೇವೇರಾಜೇಗೌಡರನ್ನು ಪ್ರಕರಣ ದಾಖಲಾಗಿ ಒಂದು ತಿಂಗಳ ನಂತರ ಬಂಧಿಸಿದ್ದು ಯಾಕೆ? ಎಸ್ಐಟಿಯವರಿಗೆ ದೇವೇರಾಜೇಗೌಡರಿಂದ ಏನು ಮಾಹಿತಿ ಬೇಕಿದೆ? ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಮಾಹಿತಿನಾ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿನಾ? ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆಯಾಗಿತ್ತಲ್ಲ ಅದರ ಮಾಹಿತಿನಾ? ಏತಕ್ಕಾಗಿ ಎಸ್ಐಟಿ ನಾಲ್ಕು ದಿನದಿಂದ ವಶಕ್ಕೆ ಪಡೆದುಕೊಂಡು ಇಟ್ಟುಕೊಂಡಿದೆ ಎಂದು ಅವರು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ವಿಡಿಯೋ ಮಾಡಿಕೊಂಡವನ ಅಪರಾಧ. ಮತ್ತೊಂದು ಆ ವಿಡಿಯೋವನ್ನು ವೈರಲ್ ಮಾಡಿ ಕುಟುಂಬಗಳನ್ನು ಬೀದಿಗೆ ತಂದವರದ್ದು. ಇದು ಕೂಡ ಘೋರ ಅಪರಾಧ. ಆದರೆ ಎಸ್ಐಟಿ ವೈರಲ್ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾನೆ. ಆದರೆ ಎಸ್ಐಟಿಗೆ ಸಿಗುತ್ತಿಲ್ಲ ಅಂದರೆ ಏನು ಅರ್ಥ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಎಸ್ಐಟಿ ಸೂಕ್ತವಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಅವರು ಆರೋಪಿಸಿದರು.

ಹಿಂದಿನ ಲೇಖನಠಾಣೆಯಲ್ಲಿ ಸಿವಿಲ್ ವ್ಯಾಜ್ಯ ತೀರ್ಮಾನಿಸಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು?: ಹೈಕೋರ್ಟ್‌ ಆಕ್ರೋಶ
ಮುಂದಿನ ಲೇಖನಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರು ಪಾಲು