ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಳಸಿದ ಪದಕ್ಕಾಗಿ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಕ್ಷಮಾಪಣಾ ಪತ್ರದ ಮೂಲಕ ಕ್ಷಮೆಯಾಚಿಸಿದ್ದಾರೆ.
ಜಿಂದಾಲ್ ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ನಗರದ ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಟಿ ವೇಳೆ “ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ” ಎಂದಿದ್ದೆ, ಮಾತಿನ ಭರದಲ್ಲಿ ಈ ರೀತಿಯ ಪದ ಬಳಸಿದ್ದೆ, ಅಲ್ಲಿ ಬಳಿಸಿದ ಪದ ನನಗೆ ಶೋಭೆ ತರುವುದಿಲ್ಲ. ಈ ಹಿನ್ನೆಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಿದ್ದಾರೆ.