ಮನೆ ಮನರಂಜನೆ ನೈಜ ಘಟನೆಗಳ ಆಧಾರಿತ ‘ಹತ್ಯ’ ಸಿನಿಮಾ

ನೈಜ ಘಟನೆಗಳ ಆಧಾರಿತ ‘ಹತ್ಯ’ ಸಿನಿಮಾ

0

ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ಧ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿ ಚಿತ್ರವೊಂದು ತಯಾರಾಗಿದ್ದು, ಚಿತ್ರಕ್ಕೆ “ಹತ್ಯ’ ಎಂದು ಟೈಟಲ್ ಇಡಲಾಗಿದೆ.

Join Our Whatsapp Group

ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ.

ಇದೊಂದು ಮಹಿಳಾ ಪ್ರಧಾನ ಚಿತ್ರ ಎನ್ನುತ್ತಾರೆ ಕಥೆ ಹಾಗೂ ಚಿತ್ರಕಥೆ ಬರೆದಿರುವ ಗಂಗಾಧರ್(ಗಂಗು). ವರುಣ್ .ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಸಾಗರಂ ವರ್ಲ್ಡ್ ಸಿನಿಮಾ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅಲೆನ್ ಕ್ರಿಸ್ಟ ಸಂಗೀತ ನಿರ್ದೇಶನ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಮಾಸ್ ಮಾದ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಕಾಸ್ ಗೌಡ, ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.