ಮನೆ ಅಪರಾಧ ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ, ಆತ್ಮಹತ್ಯೆಗೆ ಯತ್ನಿಸಿದ ತಂದೆ

ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ, ಆತ್ಮಹತ್ಯೆಗೆ ಯತ್ನಿಸಿದ ತಂದೆ

0

ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಹಳೇರಿತ್ತಿಯ ನಾಗೇಶ ಪವಾಡೆಪ್ಪರ(42) ಮತ್ತು ಅವರ ಇಬ್ಬರು ಮಕ್ಕಳಿಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹುಬ್ಬಳ್ಳಿಯ ಕಿಮ್ಸ್​ಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.

ಹೆಂಡತಿ ಮಕ್ಕಳನ್ನು ಊರಲ್ಲೇ ಬಿಟ್ಟು ನಾಗೇಶ ದುಡಿಯಲು ಬೇರೆ ಕಡೆ ಹೋಗಿದ್ದರು. ಈಗ ಗ್ರಾಮಕ್ಕೆ ಬಂದಿದ್ದು, ಪತ್ನಿ ಜೊತೆ ಹಣದ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು. ಬಳಿಕ 10 ವರ್ಷದ ಮಗ, 8 ವರ್ಷದ ಮಗಳನ್ನು ಊರ ಹೊರಗಡೆ ಕರೆದುಕೊಂಡು ಹೋಗಿ ಅವರಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಂಬಂಧಿಕರೊಬ್ಬರು ತಿಳಿಸಿದ್ದಾರೆ.

ಇನ್ನೊಂದೆಡೆ ನಾಗೇಶ್ ಕೆಲ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರು. ಇದರಿಂದಾಗಿ ಸಾಲ ಪಾವತಿಸುವಂತೆ ಸಾಲಗಾರರು ಕಿರುಕುಳ ನೀಡಿರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ಸಂಬಂಧಿಕರು ಶಂಕಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಲಗಾರರ ಕಿರುಕುಳಕ್ಕೆ ಆತ್ಮಹತ್ಯೆ ಯತ್ನ: ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನ 32 ವರ್ಷದ ದಾದಾಪೀರ್ ತಿಳುವಳ್ಳಿ ಎಂದು ಗುರುತಿಸಲಾಗಿದೆ.

ದಾದಾಪೀರ ಅಡಕೆ ವ್ಯಾಪಾರ ಮಾಡುತ್ತಿದ್ದು, 30 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. 30 ಲಕ್ಷ ರೂ ಬೆಲೆಯ ಅಡಕೆಯನ್ನ ಬೇರೆಯವರಿಗೆ ಕೊಡಿಸಿದ್ದ ದಾದಾಪೀರ್​ಗೆ ಅಡಕೆ ಖರೀದಿಸಿದ ವ್ಯಕ್ತಿಗಳು ಮರಳಿ ವಾಪಸ್​ ನೀಡಿರಲಿಲ್ಲ. ಇದರಿಂದಾಗಿ ಮಾಡಿದ ಸಾಲಕ್ಕೆ ಹೆಚ್ಚಿನ ಬಡ್ಡಿ ಕಟ್ಟಲಾಗದೇ ದಾದಾಪೀರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ದಾದಾಪೀರ್​ನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.