ಹಾವೇರಿ: ತನ್ನ ಅಣ್ಣನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೈದುನನೇ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.
ಗೀತಾ ಮರಿಗೌಡ (32) ಮತ್ತು ಇವರ ಮಕ್ಕಳಾದ ಅಕುಲ್ (10), ಅಂಕಿತಾ (7) ಕೊಲೆಯಾದ ದುರ್ದೈವಿಗಳು.
ಕುಮಾರಗೌಡ್ (35) ಮೂವರನ್ನು ಕೊಲೆ ಮಾಡಿ ಪರಾರಿಯಾಗಿರುವ ಮೈದುನ.
ಮೃತ ಗೀತಾಳ ಪತಿ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬದಲ್ಲಿನ ಜಗಳವೇ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Saval TV on YouTube