ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಇತ್ತೀಚೆಗೆ ನಡೆದ ಈ ಘಟನೆಯಲ್ಲಿ ಕಾಮುಕನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಅಪ್ರಾಪ್ತೆಗೆ ನ್ಯಾಯ ಒದಗಿಸಲು ಪೋಕ್ಸೋ ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸರು ಬಂಧಿಸಿದ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ್ ಮತ್ತು ಮಾರುತಿ ಶಿಗ್ಗಟ್ಟಿ ಎಂದು ಗುರುತಿಸಲಾಗಿದೆ. ಈ ನಾಲ್ವರಲ್ಲಿ ಪ್ರಮುಖ ಆರೋಪಿ ಗೋಣಿರುದ್ರಾ ಶಿಗ್ಗಟ್ಟಿ ಎನ್ನಲಾಗುತ್ತಿದ್ದು, ಉಳಿದ ಮೂವರು ಘಟನೆ ನಡೆದ ನಂತರ ಸಂತ್ರಸ್ತೆಯ ಕುಟುಂಬದೊಂದಿಗೆ ರಾಜಿ ಪಂಚಾಯತಿ ಮಾಡಿಸಿದ್ದರು ಎನ್ನಲಾಗಿದೆ.
ಘಟನೆಯ ವಿವರಗಳ ಪ್ರಕಾರ, ದೌರ್ಜನ್ಯ ನಡೆದ ನಂತರ ಸಂತ್ರಸ್ತೆಯ ಕುಟುಂಬದ ಮೇಲೆ ಒತ್ತಡ ಹೇರಲು ಕೆಲವರು ರಾಜಿ ಪಂಚಾಯತಿ ಮಾಡಿಸಿದ್ದು, ಈ ನಿಟ್ಟಿನಲ್ಲಿ ಕೂಡ ತನಿಖೆ ನಡೆಯುತ್ತಿದೆ. ಈ ನಾಲ್ವರೂ ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.














