ಮನೆ ಕಾನೂನು ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು: ಸುಪ್ರೀಂ ಮೊರೆ ಹೋಗಲು ನಿರ್ಧಾರ

ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು: ಸುಪ್ರೀಂ ಮೊರೆ ಹೋಗಲು ನಿರ್ಧಾರ

0

ಬೆಂಗಳೂರುಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಾರದು, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.

ಈಗ ವರ್ಷದ ಕೊನೆಯಾದ್ದರಿಂದ ಶಾಲಾ-ಕಾಲೇಜುಗಳಲ್ಲಿ ವಾರ್ಷಿಕ ಪರೀಕ್ಷೆಯ ಸಮಯವಿದು, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗುತ್ತಿರುವುದರಿಂದ ಅಲ್ಲಿಂದ ತೀರ್ಪು ಬರುವವರೆಗೆ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಿ ಎಂದು ವಿದ್ಯಾರ್ಥಿ ಪ್ರತಿನಿಧಿಗಳು ಒತ್ತಾಯಿಸುತ್ತಿದ್ದಾರೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹಿಜಾಬ್ ಪರ ವಕೀಲರು ತಿಳಿಸಿದ್ದಾರೆ. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿಹಿಡಿದಿದೆ. ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಮಾಡಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಕೋರ್ಟ್ ತೀರ್ಪಿನ ಪ್ರತಿ ನೋಡಿಕೊಂಡು ಮುಂದಿನ ಕ್ರಮ ಎಂದು ಅರ್ಜಿದಾರರ ಪರ ವಕೀಲ ಶತಭಿಷ ಶಿವಣ್ಣ ಹೇಳಿಕೆ ನೀಡಿದ್ದಾರೆ.