ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕುಮಾರಸ್ವಾಮಿ ಅವರು, ತಮ್ಮ ತಂದೆ ಹಾಗೂ ತಾಯಿಗಳ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನ ಪದ್ಮನಾಭನಗರದಲ್ಲಿ ದೇವೇಗೌಡರ ನಿವಾಸಕ್ಕೆ ಗುರುವಾರ ಬೆಳಗ್ಗೆ ಹೆಚ್ಡಿಕೆ ಆಗಮಿಸಿದ್ದರು. ತಾಯಿ ಚನ್ನಮ್ಮ ಹಾಗೂ ತಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಇದೇ ವೇಳೆ, ದೇವೇಗೌಡರು ಬಿ ಫಾರಂ ಅನ್ನು ಕುಮಾರಸ್ವಾಮಿ ಅವರಿಗೆ ನೀಡಿ, ಅವರ ತಲೆ ಸವರಿ ಆಶೀರ್ವದಿಸಿದರು.
”ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ತಂದೆ, ತಾಯಿ ಅವರ ಆಶೀರ್ವಾದ ಪಡೆದುಕೊಂಡೆ. ಇದೇ ವೇಳೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಂದ ಬಿ ಫಾರಂ ಸ್ವೀಕರಿಸಿದೆ” ಎಂದು ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.