ಮನೆ ರಾಜ್ಯ ಹೆಚ್​ ಡಿ ರೇವಣ್ಣ ಜೈಲಿನಿಂದ ಬಿಡುಗಡೆ: ಅಭಿಮಾನಿಗಳನ್ನು ಚದುರಿಸಲು ಲಾಠಿಚಾರ್ಜ್

ಹೆಚ್​ ಡಿ ರೇವಣ್ಣ ಜೈಲಿನಿಂದ ಬಿಡುಗಡೆ: ಅಭಿಮಾನಿಗಳನ್ನು ಚದುರಿಸಲು ಲಾಠಿಚಾರ್ಜ್

0

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಸೋಮವಾರ  ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Join Our Whatsapp Group

ಹೆಚ್​ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ​ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್​ ಪ್ರಕ್ರಿಯೆಗಳು ಇಂದಿಗೆ (ಮೇ 14) ಮುಂದೂಡಲಾಗಿತ್ತು. ಹೀಗಾಗಿ ಹೆಚ್​ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್​​ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.