ಬೆಂಗಳೂರು(Bengaluru): ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಅಕಾಲಿಕ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಅತ್ಯಂತ ಕ್ರಿಯಾಶೀಲರಾಗಿ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ಸರಳತೆ ಸಜ್ಜನಿಕೆಯ ವ್ಯಕ್ತಿತ್ವದವರು ಹಾಗೂ ಅತ್ಯುತ್ತಮ ಪತ್ರಕರ್ತರಾಗಿದ್ದರು.
ಗುರುಲಿಂಗಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಮತ್ತು ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.














